ಅಭಿಪ್ರಾಯ / ಸಲಹೆಗಳು

ಹೈನುಗಾರಿಕೆ

       ಸಹಕಾರ ವಲಯದಲ್ಲಿ ಶ್ವೇತ ಕ್ರಾಂತ್ರಿಯು ನಡೆದಿದ್ದು, ಇದು ರಾಜ್ಯಾದ್ಯಂತ ಹರಡಿರುತ್ತದೆ. ಪ್ರಾಥಮಿಕ ಹಾಲು ಉತ್ಪಾದನಾ ಸಹಕಾರ ಸಂಘಗಳು ಹಾಗೂ ರಾಜ್ಯ ಹಾಲು ಉತ್ಪಾದಕರ ಒಕ್ಕೂಟವು ಶಕ್ತಿಯುತ ಹಾಗೂ ದೂರ ದೃಷ್ಟಿಯಿಂದ ಈ ವಲಯವನ್ನು ಮುನ್ನಡೆಸುತ್ತಿದೆ.

 

       ರಾಜ್ಯ ಮಟ್ಟದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ಹಾಗೂ ಗ್ರಾಮೀಣ ಮಟ್ಟದಲ್ಲಿ ಹಾಲು ಉತ್ಪಾದನಾ ಸಹಕಾರ ಸಂಘಗಳಾಗಿ 3 ಹಂತಗಳಲ್ಲಿ ಹಾಲು ಉತ್ಪಾದನಾ ಸಹಕಾರ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ. ಮಹಾಮಂಡಳವು ಗ್ರಾಮೀಣ ಹಾಲು ಉತ್ಪಾದಕರಿಗೆ ನ್ಯಾಯಯುತ ಬೆಲೆಯನ್ನು ನೀಡುವುದಲ್ಲದೆ ಪಟ್ಟಣ ಪ್ರದೇಶದ ಗ್ರಾಹಕರ ಬೇಡಿಕೆಗಳಾದ ಶುದ್ಧ ಆರೋಗ್ಯಕರ ಮತ್ತು ಗುಣಮಟ್ಟದ ಹಾಲು, ಬೆಣ್ಣೆ, ತುಪ್ಪ, ಪೇಡಾ, ಬರ್ಫಿ ಪನೀರ್, ಖೋವಾ, ಸುವಾಸನೆಯುಕ್ತ ರುಚಿಕರ ಹಾಲು ಇತ್ಯಾದಿಗಳನ್ನು ಒದಗಿಸುತ್ತಿದೆ.

 

ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ.

       ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ., ಇದು ಕರ್ನಾಟಕ ರಾಜ್ಯದ ಶೃಂಗ ಸಂಸ್ಥೆಯಾಗಿದ್ದು, ಇಡೀ ರಾಜ್ಯಾದ್ಯಂತ 3 ದಶಕಗಳಿಂದ 14 ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟಗಳ ಮೂಲಕ ಹಾಲು ಅಭಿವೃದ್ಧಿ ಚಟುವಟಿಕೆಗಳನ್ನು ಜಾರಿಗೊಳಿಸುತ್ತಾ ಗ್ರಾಮೀಣ ಹಾಲು ಉತ್ಪಾದಕರ ಜೀವನಕ್ಕೆ ಅಭ್ಯುದಯವನ್ನು ಒದಗಿಸಿದೆ..

       ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ., ಇದು ರಾಜ್ಯ ಮಟ್ಟದ ಸಂಸ್ಥೆಯಾಗಿದ್ದು, ಕೆ.ಎಂ.ಎಫ್ ಕಾರ್ಯವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಾಲು ಉತ್ಪಾದಕರ ಒಕ್ಕೂಟಗಳಲ್ಲಿ ಹಾಲು ಉತ್ಪಾದನೆಯ ಅಭಿವೃದ್ಧಿ ಚಟುವಟಿಕೆಗಳ ಜವಾಬ್ದಾರಿಯನ್ನು ನಿರ್ವಹಿಸುತ್ತದೆ..

       ಕೆ.ಎಂ.ಎಫ್. ಇದು ಹಾಲು ಉತ್ಪಾದಕರ ರೈತರು ಮತ್ತು ಗ್ರಾಹಕರ ನಡುವೆ ಕೊಂಡಿಯಂತೆ ಕಾರ್ಯನಿರ್ವಹಿಸುತ್ತಿದ್ದು, ಇದು ಗ್ರಾಮೀಣ ಹಾಲು ಉತ್ಪಾದಕರಿಗೆ ನಿರಂತರ ಮಾರುಕಟ್ಟೆಯನ್ನು ಒದಗಿಸುವುದು ಹಾಗೂ ಗ್ರಾಹಕರ ಬೇಡಿಕೆಗೆ ಅನುಸಾರ ಉತ್ತಮ ಗುಣಮಟ್ಟದ ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದೆ. ಗ್ರಾಮೀಣ ಪ್ರದೇಶದ ಹಾಲು ಉತ್ಪಾದನೆಯ ಅಭಿವೃದ್ಧಿಗೆ ಒತ್ತು ಕೊಡುವ ಉದ್ದೇಶದಿಂದ ಅವಶ್ಯ ತಾಂತ್ರಿಕ ಸೌಲಭ್ಯಗಳು ಜಾನುವಾರುಗಳಿಗೆ ಸಮತೂಕದ ಪಶು ಆಹಾರ, ಪಶುಪಾಲನಾ ನೆರವು ಎ . ಐ ಕೇಂದ್ರಗಳಿಗೆ ಎಲ್ .ಎನ್ 2 ಕಂಟೇನರ್ ಗಳು ಮತ್ತು ಚುಚ್ಚುಮದ್ದುಗಳನ್ನು ನಿರಂತರವಾಗಿ ಹಾಲು ಉತ್ಪಾದಕರಿಗೆ ಸರಬರಾಜು ಮಾಡಲಾಗುತ್ತಿದೆ.

 

 

ಇತ್ತೀಚಿನ ನವೀಕರಣ​ : 30-05-2023 11:38 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಹಕಾರ ಸಿಂಧು - ಸಹಕಾರ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080